ಸಂತು ಸ್ಟ್ರೈಟ್ ಫಾರ್ವರ್ಡ್ ಅಧೀಕೃತ ಟ್ರೈಲರ್ - ಟೀಸರ್ | ಯಶ್ ರಾಧಿಕಾ ಪಂಡಿತ್

by - October 23, 2016



ಈ ವಾರ ಬಿಡುಗಡೆಯಾಗಲಿರುವ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಸಂತು ಸ್ಟ್ರೈಟ್ ಫಾರ್ವರ್ಡ್ ಚಿತ್ರ ಭಾರೀ ಸದ್ದು ಮಾಡುತ್ತಿದೆ.

ಚಿತ್ರದ ಹಾಡುಗಳು ಈಗಾಗಲೇ ಗಮನ ಸೆಳೆಯುತ್ತಿದೆ. ಇದರಲ್ಲಿ ನಾಯಕ ಯಶ್ ಇಂಟ್ರಡಕ್ಷನ್ ಹಾಡೊಂದಕ್ಕೆ 1 ಕೋಟಿ ಖರ್ಚು ಮಾಡಲಾಗಿದೆಯಂತೆ.ಇನ್ನು 'ಸಂತು ಸ್ಟ್ರೈಟ್ ಫಾರ್ವರ್ಡ್' ಚಿತ್ರವನ್ನು ಮಹೇಶ್ ರಾವ್ ನಿರ್ದೇಶಿಸಿದ್ದಾರೆ. ಯಶ್ ಜೊತೆಗೆ ರಾಧಿಕಾ ಪಂಡಿತ್ ನಾಯಕಿಯಾಗಿ ನಟಿಸಿದ್ದು, ತಮಿಳಿನ ಶ್ಯಾಮ್ ಒಂದು ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರಕ್ಕೆ ವಿ. ಹರಿಕೃಷ್ಣ ಸಂಗೀತವಿದೆ.

ದೀಪಾವಳಿ ಹಬ್ಬದ ಪ್ರಯುಕ್ತ ಅಕ್ಟೋಬರ್ 29ರಿಂದ 31ರವರೆಗೂ ಮೂರು ದಿನಗಳ ಕಾಲ ರಜೆ ಸಿಗುತ್ತದೆ. ನವೆಂಬರ್ ಒಂದರಂದು ರಾಜ್ಯೋತ್ಸವ. ಹೀಗೆ ಸಾಲು ಸಾಲಾಗಿ ನಾಲ್ಕು ದಿನಗಳ ಕಾಲ ರಜೆ ಸಿಗುವುದರಿಂದ, ಚಿತ್ರ ಬಿಡುಗಡೆಯಾದರೆ ಜನ ಬರುತ್ತಾರೆ ಎಂಬ ಕಾರಣಕ್ಕೆ ದೀಪಾವಳಿ ಹಬ್ಬದ ಪ್ರಯುಕ್ತ ಸಂತು ಸ್ಟ್ರೈಟ್ ಫಾರ್ವರ್ಡ್ ಬಿಡುಗಡೆಯಾಗುತ್ತಿದೆ. ಈ ಚಿತ್ರ ದೀಪಾವಳಿ ಹಬ್ಬದ ಸಂದರ್ಭದಲ್ಲಿ ರಿಲೀಸ್ ಆಗುತ್ತಿರುವುದು ಅಭಿಮಾನಿಗಳ ಸಂಭ್ರಮವನ್ನು ಹೆಚ್ಚಿಸಿದೆ.

ಟ್ರೈಲರ್ ಗಾಗಿ  ಕಾತುರದಿಂದ ಕಾಯುತ್ತಿರುವ ಅಭಿಮಾನಿಗಳಿಗೆ ಇಲ್ಲಿದೆ ಟೀಸರ್-ಟ್ರೈಲರ್ :  


You May Also Like

0 comments